alex Certify BREAKING : ಅವಧಿ ಮೀರಿ ಪಬ್ ನಲ್ಲಿ ಪಾರ್ಟಿ : ನಟ ದರ್ಶನ್ ಸೇರಿ 8 ಮಂದಿಗೆ ಪೊಲೀಸ್ ನೋಟಿಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಅವಧಿ ಮೀರಿ ಪಬ್ ನಲ್ಲಿ ಪಾರ್ಟಿ : ನಟ ದರ್ಶನ್ ಸೇರಿ 8 ಮಂದಿಗೆ ಪೊಲೀಸ್ ನೋಟಿಸ್

ಬೆಂಗಳೂರು : ನಟ ದರ್ಶನ್ ಅಭಿನಯದ ಕಾಟೇರ ಸಿನಿಮಾ ರಿಲೀಸ್ ಆಗಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ.

ಕಾಟೇರ ಸಿನಿಮಾದ ಸಕ್ಸಸ್ ಪಾರ್ಟಿ ಇದೀಗ ವಿವಾದಕ್ಕೆ ಕಾರಣವಾಗಿದ್ದು, ನಟ ದರ್ಶನ್ ಸೇರಿ 8 ಮಂದಿಗೆ ನೋಟಿಸ್ ನೀಡಲಾಗಿದೆ.

ನಟ ದರ್ಶನ್, ಡಾಲಿ ಧನಂಜ, ಯ್, ಚಿಕ್ಕಣ್ಣ, ರಾಕ್ ಲೈನ್ ವೆಂಕಟೇಶ್, ಅಭಿಷೇಕ್ ಅಂಬರೀಷ್, ನಿನಾಸಂ ಸತೀಶ್ , ಸಂಗೀತ ನಿರ್ದೇಶಕ ಹರಿಕೃಷ್ಣ,  ನಿರ್ದೇಶಕ ತರುಣ್ ಸುಧೀರ್    ಸೇರಿ 8 ಮಂದಿಗೆ ನೋಟಿಸ್ ನೀಡಲಾಗಿದೆ. ನೋಟಿಸ್ ತಲುಪಿದ ಕೂಡಲೇ ವಿಚಾರಣೆಗೆ ಹಾಜರಾಗುವಂತೆ ಸುಬ್ರಮಣ್ಯನಗರ ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಸಿನಿಮಾದ ಸಕ್ಸಸ್ ಹಿನ್ನೆಲೆ ಚಿತ್ರತಂಡ ಬೆಂಗಳೂರಿನ ಪಬ್ ವೊಂದರಲ್ಲಿ ಅವಧಿ ಮೀರಿ ಪಾರ್ಟಿ ನಡೆಸಿತ್ತು ಎನ್ನಲಾಗಿದೆ. ತಡರಾತ್ರಿ 1 ಗಂಟೆವರೆಗೆ ಯಾರೆಲ್ಲಾ ಪಾರ್ಟಿ ಮಾಡಿದ್ದಾರೋ ಅವರಿಗೆ ನೋಟಿಸ್ ನೀಡಲಾಗಿದೆ. ಬೆಂಗಳೂರಿನ ರಾಜಾಜಿನಗರದ ಒರಾಯನ್ ಮಾಲ್ ಬಳಿ ಇರುವ ಜೆಟ್ ಲ್ಯಾಗ್ ಪಬ್ನಲ್ಲಿ ಸ್ಟಾರ್ಸ್ ಪಾರ್ಟಿಗೆ ಎಲ್ಲರೂ ಸೇರಿದ್ದರು.

ಹೊಟೇಲ್, ಬಾರ್ ಅಂಡ್ ರೆಸ್ಟೋರೆಂಟ್ ಗೆ ಅನ್ವಯವಾಗುವ ನಿಯಮ ಪ್ರಕಾರ ಮಧ್ಯರಾತ್ರಿ 1 ಗಂಟೆಗೆ ಪಬ್ ಮುಚ್ಚಬೇಕು. ಒಂದು ಗಂಟೆ ಆಗುತ್ತಿದ್ದಂತೆ ಪಾರ್ಟಿ ಪೂರ್ಣಗೊಳಿಸಬೇಕಿತ್ತು, ಅವಧಿ ಮೀರಿ ಪಾರ್ಟಿ ನಡೆಸಿದ ಹಿನ್ನೆಲೆ ಪೊಲೀಸರು ಪಬ್ ಮಾಲೀಕರ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದರು, ಇದೀಗ ನಟರಿಗೂ ನೋಟಿಸ್ ನೀಡಿದ್ದಾರೆ ಎಂದು ಹೇಳಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...