ಬೆಂಗಳೂರು : ಬೆಂಗಳೂರಿನ ಏರ್ ಪೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಪ್ರತ್ಯಕ್ಷವಾಗಿದ್ದು, ಪವಿತ್ರಾ ಗೌಡ ಯಾವ ಕಡೆ ಹೊರಟ್ಟಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ತಾವು ದೇವಾಲಯಕ್ಕೆ ತೆರಳಲು ಕೆಲ ವಸ್ತುಗಳನ್ನು ಖರೀದಿ ಮಾಡಲು ವ್ಯಾವಹಾರಿಕ ಕಾರಣಗಳಿಗಾಗಿ ಹೊರ ರಾಜ್ಯಗಳಿಗೆ ತೆರಳಲು ಅನುಮತಿ ನೀಡಬೇಕೆಂದು ಮನವಿ ಕೋರ್ಟ್ ಗೆ ಮನವಿ ಮಾಡಿದ್ದರು. ಅದರಂತೆ ನ್ಯಾಯಾಧೀಶರು ಪವಿತ್ರಾ ಗೌಡಗೆ ಅನುಮತಿ ನೀಡಿದ್ದರು. ಪವಿತ್ರಾ ಗೌಡ ದೆಹಲಿ ಕಡೆ ಹೊರಟಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿದೆ.
ಇನ್ನೂ, ದರ್ಶನ್ ಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಹೈಕೋರ್ಟ್ ನಿಂದ 7 ಮಂದಿ ಕೊಲೆ ಆರೋಪಿಗಳಿಗೆ ಜಾಮೀನು ನೀಡಿದ್ದು, ಹೈಕೋರ್ಟ್ ನೀಡಿದ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ. ಇಂದು ಸುಪ್ರೀಂಕೋರ್ಟಿನಲ್ಲಿ ಜಾಮೀನು ರದ್ದು ಅರ್ಜಿಯ ಮೇಲ್ಮನವಿ ವಿಚಾರಣೆ ನಡೆಯಲಿದೆ.