ಬೆಂಗಳೂರು : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 6 ಮತ್ತು 7 ನೇ ಆರೋಪಿಗೆ ಕೋರ್ಟ್ ಜಾಮೀನು ನೀಡಿದೆ.
ಪ್ರಕರಣದ 6 ಮತ್ತು 7 ನೇ ಆರೋಪಿಗಳಾದ ಚೇತನ್, ಲಿಖಿತ್ ಗೌಡ ಗೆ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. 18 ದಿನದ ಬಳಿಕ ಆರೋಪಿಗಳಿಗೆ ಜಾಮೀನು ಸಿಕ್ಕಿದೆ.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಆರೋಪದಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತ ಲಿಖಿತ್ ಗೌಡ ಹಾಗೂ ಚೇತನ್ ಅವರನ್ನು ಎಸ್ಐಟಿ ಅಧಿಕಾರಿಗಳು ಮೇ.12ರಂದು ಬಂಧಿಸಿದ್ದರು.
ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಇಂದು ಭಾರತಕ್ಕೆ ಆಗಮಿಸಲಿದ್ದು, ಅವರನ್ನು ಬಂಧಿಸಲು ಎಸ್ ಐ ಟಿ ಅಧಿಕಾರಿಗಳು ಸಕಲ ಸಿದ್ದತೆ ನಡೆಸಿದ್ದಾರೆ.