ಬೆಂಗಳೂರು : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ಗೌಡ , ಚೇತನ್ ರನ್ನು ಮೂರು ದಿನ ಎಸ್ ಐ ಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯಿದ್ದ ಕಾರಣಕ್ಕೆ ಹೈಕೋರ್ಟ್ ಗೆ ಬಂದಿದ್ದ ಇಬ್ಬರನ್ನು ನಿನ್ನೆ ಎಸ್ ಐ ಟಿ ವಶಕ್ಕೆ ಪಡೆದು ಕೋರ್ಟ್ ಗೆ ಹಾಜರುಪಡಿಸಿತ್ತು. ವಿಚಾರಣೆ ನಡೆಸಿದ ಹಾಸನದ 2 ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ಸಿ ಕೋರ್ಟ್ ನವೀನ್ ಗೌಡ , ಚೇತನ್ ರನ್ನು ಮೂರು ದಿನ ಎಸ್ ಐ ಟಿ ಕಸ್ಟಡಿಗೆ ನೀಡಿ ಆದೇಶಿಸಿದೆ.
ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಏ.23 ರಂದು ಹಾಸನದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಸದ್ಯದಲ್ಲೇ ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆಯಲಿದ್ದಾರೆ.