
ಬೆಂಗಳೂರು : ಬೆಂಗಳೂರಿನ ಜನತೆಗೆ ಮತ್ತೊಮ್ಮೆ ಚಿರತೆ ಆತಂಕ ಎದುರಾಗಿದ್ದು, ವೈಟ್ ಫೀಲ್ಡ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಚಿರತೆ ಓಡಾಟ ನಡೆಸಿದೆ.
ಬೆಂಗಳೂರಿನ ವೈಟ್ ಫೀಲ್ಡ್, ಕೂಡ್ಲುವಿನ ಎಇಸಿಎಸ್ ಲೇಔಟ್ ಬಳಿ ರಾತ್ರಿ ಹೊತ್ತು ಕಾರಿಗೆ ಅಡ್ಡಲಾಗಿ ಚಿರತೆ ಓಡಿದೆ. ಸಿಸಿಟಿವಿ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಚಿರತೆ ಓಡಾಟದಿಂದ ಸ್ಥಳೀಯ ಜನರಲ್ಲಿ ಆತಂಕ ಎದುರಾಗಿದೆ.
ವೈಟ್ ಫೀಲ್ಡ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಓಡಾಟ ನಡೆಸಿರುವುದು ಇದು ಎರಡನೇ ಬಾರಿಯಾಗಿದೆ. ಚಿರತೆ ಪ್ರತ್ಯಕ್ಷವಾಗಿರುವುದರಿಂದ ಜನರಲ್ಲಿ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಚಿರತೆಯನ್ನು ಸೆರೆಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ.