alex Certify BREAKING : ‘CM ಸಿದ್ದರಾಮಯ್ಯ’ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ : ಸಚಿವರಿಂದ ‘ರಾಜಭವನ ಚಲೋ’..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘CM ಸಿದ್ದರಾಮಯ್ಯ’ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ : ಸಚಿವರಿಂದ ‘ರಾಜಭವನ ಚಲೋ’..!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆ ಸಚಿವರು ರಾಜಭವನ ಚಲೋ ಗೆ ಸಿದ್ದತೆ ನಡೆಸಿದ್ದಾರೆ.

ಸಚಿವರು, ಶಾಸಕರು ಸಿಎಂ ಸಿದ್ದರಾಮಯ್ಯಗೆ ಬೆಂಬಲ ನೀಡಲಿದ್ದು, ರಾಜಭವನ ಚಲೋ ಗೆ ಸಿದ್ದತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17 ಮತ್ತು ಭಾರತ್ ನ್ಯಾಯ ಸಂಹಿತಾದ ಸೆಕ್ಷನ್ 18 ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲು ಗೆಹ್ಲೋಟ್ ಅನುಮತಿ ನೀಡಿದ್ದಾರೆ.

ಮಾಹಿತಿಯ ಪ್ರಕಾರ, ಮುಖ್ಯಮಂತ್ರಿಗಳ ಕಾನೂನು ತಂಡವು ಶನಿವಾರ ಕರ್ನಾಟಕ ಹೈಕೋರ್ಟ್ನಲ್ಲಿ ಆದೇಶವನ್ನು ಪ್ರಶ್ನಿಸುವ ಸಾಧ್ಯತೆಯಿದೆ. ರಾಜ್ಯಪಾಲರು ಆತುರದಿಂದ ವರ್ತಿಸಿ ಆದೇಶ ಹೊರಡಿಸಿದ್ದಾರೆ ಎಂದು ವಾದಿಸಿ ಆದೇಶದಲ್ಲಿ ನೀಡಲಾದ ತರ್ಕವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆಯಿದೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ. “ರಾಜ್ಯಪಾಲರ ಮೇಲೆ ಕೇಂದ್ರದಿಂದ ಒತ್ತಡವಿತ್ತು ಎಂಬುದು ಈ ಕ್ರಮದ ಮೂಲಕ ಸ್ಪಷ್ಟವಾಗಿದೆ. ಕೇಂದ್ರ ಸರ್ಕಾರ ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಂಡಿದೆ. ಸಿಎಂ ರಾಜೀನಾಮೆ ಪ್ರಶ್ನೆಯೇ ಉದ್ಭವಿಸುವುದಿಲ್ಲ. ನಾವೆಲ್ಲರೂ ಸಿದ್ದರಾಮಯ್ಯ ಅವರೊಂದಿಗೆ ಇದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...