ನವದೆಹಲಿ : ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ನಡೆಯಲಿದ್ದು, ಈ ವೇಳೆ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ.
ಇಂದು ಬೆಳಗ್ಗೆ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನಲ್ಲಿ ವಿಪಕ್ಷ ನಾಯಕರ ಸಭೆಯ ಬಳಿಕೆ ದೆಹಲಿಗೆ ಹೋಗುವಾಗ ವಿಮಾನ ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಮಾರ್ಗ ಮಧ್ಯದಲ್ಲಿ ವಿಮಾನ ಇಳಿದ ಸೋನಿಯಾ ಗಾಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಇಂದು ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಆರೋಗ್ಯ ವಿಚಾರಿಸಿದ್ದಾರೆ ಎನ್ನಲಾಗಿದೆ..