ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಧನುಷ್ಕೋಡಿಯ ಅರಿಚಲ್ ಮುನೈ ಪಾಯಿಂಟ್ಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ತಮಿಳುನಾಡಿನ ಧನುಷ್ಕೋಡಿಯ ಅರಿಚಲ್ ಮುನೈ ಪಾಯಿಂಟ್ ಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದು, ಈ ವೇಳೆ ರಾಮಸೇತುಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಧನುಷ್ಕೋಡಿಯ ಶ್ರೀ ಕೋದಂಡರಾಮ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.
ಶನಿವಾರ ಅವರು ಕ್ರಮವಾಗಿ ಶ್ರೀರಂಗಂ ಮತ್ತು ರಾಮೇಶ್ವರಂನ ಶ್ರೀ ರಂಗನಾಥಸ್ವಾಮಿ ಮತ್ತು ಅರುಲ್ಮಿಗು ರಾಮನಾಥಸ್ವಾಮಿ ದೇವಾಲಯಗಳಿಗೆ ಭೇಟಿ ನೀಡಿದರು.
ಸೋಮವಾರ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭವ್ಯವಾದ ಶ್ರೀ ರಾಮ್ ದೇವಾಲಯದ ಪ್ರತಿಷ್ಠಾಪನೆಗೆ ಮುನ್ನದಿನ ಅವರು ರಾಮಾಯಣ ಸಂಪರ್ಕ ಹೊಂದಿರುವ ತಮಿಳುನಾಡು ದೇವಾಲಯಗಳಿಗೆ ಭೇಟಿ ನೀಡಿದ್ದಾರೆ.