ಮಂಗಳೂರು : ನಟೋರಿಯಸ್ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಮಂಗಳೂರಿನ ಹೊರವಲಯದಲ್ಲಿ ನಡೆದಿದೆ.
ರೌಡಿಶೀಟರ್ ಆಕಾಶ್ ಭವನ್ ಶರಣ್ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದು, ಗಾಯಗೊಂಡ ರೌಡಿಶೀಟರ್ ನನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.