
ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಸಿದ್ದು, ಸುಲಿಗೆ ಆರೋಪಿ ಮೇಲೆ ಶೇಷಾದ್ರಿಪುರಂ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಆರೋಪಿ ಯಾಸೀರ್ (26) ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ. ಆರೋಪಿ ಯಾಸರ್ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ದರೋಡೆ ಮಾಡುತ್ತಿದ್ದ.7 ಕ್ಕೂ ಹೆಚ್ಚು ಪ್ರಕರಣಗಳಲ್ಲಿಪೊಲೀಸರಿಗೆ ಬೇಕಾಗಿದ್ದ.
ಆರೋಪಿ ಯಾಸರ್ ಸುಲ್ತಾನ್ ಪಾಳ್ಯದ ಭುವನೇಶ್ವರ್ ನಗರ ನಿವಾಸಿಯಾಗಿದ್ದು, ಅಪ್ರಾಪ್ತನಾಗಿದ್ದಗಿನಿಂದಲೂ ಸುಲಿಗೆಗೆ ಇಳಿದಿದ್ದ.ಇಂದು ಬೆಳಗ್ಗೆ ಆರೋಪಿ ಹಿಡಿಯಲು ಹೋದಾಗ ತಪ್ಪಿಸಿಕೊಳ್ಳು ಯತ್ನಿಸಿದ್ದಾನೆ. ಬಳಿಕ ಪೊಲೀಸರ ಮೇಲೆಯೇ ಮಾರಾಕಾಸ್ತ್ರಗಿಂದ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಶೇಷಾದ್ರಿಪುರಂ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಯಾಸೀರ್ ಬಲಗಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.