
ಕೋಲಾರ : ಕೋಲಾರದಲ್ಲಿ ಅಪ್ರಾಪ್ತ ಬಾಲಕ ಕಾರ್ತಿಕ್ ಸಿಂಗ್ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿರುವ ಘಟನೆ ನಡೆದಿದೆ.
ಕೋಲಾರದಲ್ಲಿ ಇಂದು ಕಾರ್ತಿಕ್ ಸಿಂಗ್ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸಲು ಹೋಗಿದ್ದ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಕೊಲೆ ಆರೋಪಿಗಳ ಕಾಲುಗಳಿಗೆ ಗುಂಡು ಹಾರಿಸಿದ್ದಾರೆ. ಬಳಿಕ ಇಬ್ಬರನ್ನು ಬಂಧಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.