ಬೆಂಗಳೂರು : ಬೆಂಗಳೂರಲ್ಲಿ ಆಫ್ರಿಕಾ ಮೂಲದ ‘ಡ್ರಗ್ಸ್ ಪೆಡ್ಲರ್’ ಓರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಉತ್ತರ ತಾಲೂಕಿನ ಚಿಕ್ಕಬಾಣಾವರದ ವಿನಾಯಕ ನಗರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.
ಸೋಲದೇವನಹಳ್ಳಿ ಪೊಲೀಸರು ಆರೋಪಿ ಕ್ರಿಸ್ಟೋಫರ್ ಎಂಬಾತನನ್ನು ಬಂಧಿಸಿ ಆತನಿಂದ 40 ಲಕ್ಷಕ್ಕೂ ಹೆಚ್ಚು ಮೌಲ್ಯದ ಗಾಂಜಾ ಹಾಗೂ 166 ಗ್ರಾಂ ಎಂಡಿಎಂಎಂ ಡ್ರಗ್ಸ್ ಸೀಜ್ ಮಾಡಿದ್ದಾರೆ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.