ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ತೀವ್ರ ತಪಾಸಣೆ ನಡೆಸಲಾಗಿದೆ.
ಪಶ್ಚಿಮ ವಿಭಾಗದ ಠಾಣಾ ವ್ಯಾಪ್ತಿಯಲ್ಲಿದ್ದ ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಕಲಾಸಿ ಪಾಳ್ಯ, ಸಿಟಿ ಮಾರ್ಕೆಟ್ , ಕಾಟನ್ ಪೇಟೆ ಸೇರಿದಂತೆ ಹಲವು ಕಡೆ ದಾಳಿ ನಡೆಸಿರುವ ಪೊಲೀಸರು ರೌಡಿಗಳ ಕೆಲಸ, ಪೂರ್ವಾಪರ , ಫೋನ್ ನಂಬರ್ ಕಲೆಹಾಕಿದ್ದಾರೆ. ಅಲ್ಲದೇ ವಾರೆಂಟ್ ಜಾರಿಯಾದರೂ ಕೋರ್ಟ್ ಗೆ ಹಾಜರಾದ ರೌಡಿಶೀಟರ್ ಗಳಗೆ ಬಿಸಿ ಮುಟ್ಟಿಸಿದ್ದಾರೆ. ಯಾವುದೇ ಅಪರಾಧ ಕೃತ್ಯದಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಲಾಗಿದೆ.
ಲೋಕಸಭೆ ಚುನಾವಣೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಡಿಸಿಪಿ ಗಿರೀಶ್ ನೇತೃತ್ವದಲ್ಲಿ ಇಂದು ಬೆಳಗ್ಗೆ ಪೊಲೀಸರು ರೌಡಿಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ.