ಬೆಳಗಾವಿ : ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.
ಬೆಳಗಾವಿ ಹಿಂದವಾಡಿ ಹನುಮಾನ್ ನಗರದಲ್ಲಿ ಆರೋಪಿಗಳು ಬಾಡಿಗೆಗೆ ಅಪಾರ್ಟ್ ಮೆಂಟ್ ಪಡೆದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಅಪಾರ್ಟ್ ಮೆಂಟ್ ನಲ್ಲಿದ್ದ ಮಹಿಳೆಯರನ್ನು ರಕ್ಷಿಸಿ ದಂಧೆ ನಡೆಸುತ್ತಿದ್ದ ಮೂವರನ್ನು ಬಂಧಿಸಿದ್ದಾರೆ.