ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಇಂದಿಗೆ ಎಸ್ ಐ ಟಿ ಕಸ್ಟಡಿ ಅಂತ್ಯವಾದ ಹಿನ್ನೆಲೆ ಅವರನ್ನು ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು, ವಿಚಾರಣೆ ನಡೆಸಿದ ಕೋರ್ಟ್ ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಇದೇ ವೇಳೆ ಎಸ್ ಐ ಟಿ ಅಧಿಕಾರಿಗಳು ನನ್ನನ್ನು ಚೆನ್ನಾಗಿ ನೋಡಿಕೊಂಡಿಲ್ಲ, ಆರೋಗ್ಯ ಸಮಸ್ಯೆಯನ್ನು ಕಡೆಗಣಿಸಿದ್ದಾರೆ ಎಂದು ಕೋರ್ಟ್ ನಲ್ಲಿ ಹೇಳಿಕೆ ನೀಡಿದ್ದಾರೆ. ಇದಕ್ಕೆ ಜಡ್ಜ್ ಆರೋಗ್ಯ ತಪಾಸಣೆ ಯಾಕೆ ಮಾಡಿಸಿಲ್ಲ ಎಂದು ಪ್ರಶ್ನೆ ಕೇಳಿದ್ದಾರೆ, ಆಗ ಎಸ್ ಐ ಟಿ ಅಧಿಕಾರಿಗಳು ಅವರು ಹೇಗ ಹೇಳ್ತಾ ಇದ್ದಾರೆ ಎಂದು ಉತ್ತರ ನೀಡಿದರು. ವಾದ ವಿವಾದ ಆಲಿಸಿದ ಕೋರ್ಟ್ ಪ್ರಜ್ವಲ್ ರೇವಣ್ಣರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.