ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.
ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮೇ.31 ಕ್ಕೆ ವಿಚಾರಣೆ ಮುಂದೂಡಿದೆ.
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 31ರಂದು ಎಸ್ಐಟಿ ಮುಂದೆ ಹಾಜರಾಗುವುದಾಗಿ ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆ ಮಾಡಿದ್ದರು.
ಪ್ರಜ್ವಲ್ ದೇಶಕ್ಕೆ ಆಗಮಿಸುತ್ತಿದ್ದಂತೆ ಬಂಧಿಸುವ ನಿಟ್ಟಿನಲ್ಲಿ ಎಸ್ಐಟಿ ಸಿದ್ಧತೆ ನಡೆಸಿದೆ. ಬಂಧನ ಭೀತಿಯಲ್ಲಿರುವ ಪ್ರಜ್ವಲ್ ರೇವಣ್ಣ, ನಿರೀಕ್ಷಣಾ ಜಾಮೀನಿಗಾಗಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಸಿಐಡಿ ಠಾಣೆ ಯಲ್ಲಿ ದಾಖಲಾಗಿರುವ ಕೇಸ್, ಸೈಬರ್ ಕ್ರೈಂ ಹಾಗೂ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಸೇರಿ ಮೂರು ಪ್ರಕರಣಗಳಲ್ಲಿ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಇದೀಗ ವಿಚಾರಣೆ ನಡೆಸಿದ ಕೋರ್ಟ್ ವಿಶೇಷ ನ್ಯಾಯಾಲಯ ಮೇ.31 ಕ್ಕೆ ವಿಚಾರಣೆ ಮುಂದೂಡಿದೆ.