ಬೆಂಗಳೂರು : ಪ್ರಜ್ವಲ್ ರೇವಣ್ಣ ಇರುವುದು ಜರ್ಮನಿ ಅಲ್ಲ ದುಬೈನಲ್ಲಿ ಎಂದು ರಾಜ್ಯ ಸರ್ಕಾರಕ್ಕೆ ಮೂಲಗಳು ಮಾಹಿತಿ ನೀಡಿದೆ ಎಂದು ತಿಳಿದು ಬಂದಿದೆ.
ದುಬೈನ ಅಪಾರ್ಟ್ ಮೆಂಟ್ ವೊಂದರಲ್ಲಿ ಪ್ರಜ್ವಲ್ ರೇವಣ್ಣ ಇರುವುದು ಕನ್ಫರ್ಮ್ ಆಗಿದ್ದು, ಹಾಸನದ ಕೆಲವು ಯುವಕರು ತಲೆಮರೆಸಿಕೊಳ್ಳಲು ಆತನಿಗೆ ಸಹಾಯ ಮಾಡಿದ್ದಾರೆ . ರಾಜ್ಯ ಸರ್ಕಾರಕ್ಕೆ ಮಾಹಿತಿ ಸಿಗುತ್ತಿದ್ದಂತೆ ಪ್ರಜ್ವಲ್ ವಿಡಿಯೋ ಹರಿಬಿಟ್ಟಿದ್ದಾರೆ ಎಂದು ರಾಜ್ಯ ಸರ್ಕಾರಕ್ಕೆ ಮೂಲಗಳು ಮಾಹಿತಿ ನೀಡಿದೆ ಎನ್ನಲಾಗಿದೆ.
ಹಾಗೂ ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಇದೀಗ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಬಂಧನ ಭೀತಿಯಲ್ಲಿರುವ ಪ್ರಜ್ವಲ್ ರೇವಣ್ಣ, ನಿರೀಕ್ಷಣಾ ಜಾಮೀನಿಗಾಗಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪ್ರಜ್ವಲ್ ರೇವಣ್ಣ ಭಾರತಕ್ಕೆ ಬರುತ್ತಿದ್ದಂತೆ ಅವರನ್ನು ಬಂಧಿಸಲು ಎಸ್ ಐ ಟಿ ಪೊಲೀಸರು ಕಾದು ಕುಳಿತಿದ್ದಾರೆ.