alex Certify Loka Sabha Election : ಹಾಸನದ ‘ಜೆಡಿಎಸ್’ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಪ್ರಜ್ವಲ್ ರೇವಣ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Loka Sabha Election : ಹಾಸನದ ‘ಜೆಡಿಎಸ್’ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಪ್ರಜ್ವಲ್ ರೇವಣ್ಣ

ಹಾಸನ : ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಹಾಸನದ ಡಿಸಿ ಕಚೇರಿಯಲ್ಲಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತಿತರರು ಉಪಸ್ಥಿತರಿದ್ದರು.

ಲೋಕಸಭೆ ಚುನಾವಣೆಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.ಮೊದಲ ಹಂತದ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ಏಪ್ರಿಲ್ 4 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ರಾಜ್ಯದ 28 ಲೋಕಸಭೆ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಮಾರ್ಚ್ 28 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 4 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 5ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 8 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಪ್ರಕಟಿಸಲಾಗುವುದು.

ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉಡುಪಿ –ಚಿಕ್ಕಮಗಳೂರು, ಹಾಸನ, ಮಂಡ್ಯ, ಚಿತ್ರದುರ್ಗ, ಮೈಸೂರು –ಕೊಡಗು, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರಗಳಿಗೆ ಏ.26 ರಂದು ಚುನಾವಣೆ ನಡೆಯಲಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...