ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಇಂದು ಬೆಂಗಳೂರಿಗೆ ಬರೋದು ಫಿಕ್ಸ್ ಆಗಿದ್ದು, ಎಸ್ ಐ ಟಿ ಅಧಿಕಾರಿಗಳ ಬಳಿ ತಗ್ಲಾಕೊಳ್ಳಲಿದ್ದಾರೆ.ಪ್ರಜ್ವಲ್ ವಿಮಾನ ಹತ್ತುತ್ತಿದ್ದಂತೆ ಎಸ್ ಐ ಟಿ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.
ಹೌದು. ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಈಗಾಗಲೇ ಜರ್ಮನಿಯ ಮ್ಯೂನಿಕ್ ಏರ್ ಪೋರ್ಟ್ ಗೆ ಬಂದಿಳಿದ್ದಾರೆ. 2 ಟ್ರಾಲಿ ಬ್ಯಾಗ್ ಸಮೇತ ಅವರು ಮ್ಯೂನಿಕ್ ಏರ್ ಪೋರ್ಟ್ ಗೆ ಬಂದಿಳಿದ್ದು,ಲಗೇಜ್ ಚೆಕ್ ಇನ್ ಮಾಡಿರುವ ಮಾಹಿತಿ ಕೂಡ ಲಭ್ಯವಾಗಿದೆ. ಲುಫ್ತಾನ್ಸ್ ಏರ್ ಲೈನ್ಸ್ ವಿಮಾನದಲ್ಲಿ ಪ್ರಜ್ವಲ್ ರೇವಣ್ಣ ಇಂದು ಬೆಂಗಳೂರಿಗೆ ಬರುವುದು ಕನ್ಫರ್ಮ್ ಆಗಿದೆ.
ಇದರ ನಡುವೆ ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆಗೆ ವಿಚಾರಣೆ ಮುಂದೂಡಿದೆ.
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 31ರಂದು ಎಸ್ಐಟಿ ಮುಂದೆ ಹಾಜರಾಗುವುದಾಗಿ ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆ ಮಾಡಿದ್ದರು.ಪ್ರಜ್ವಲ್ ದೇಶಕ್ಕೆ ಆಗಮಿಸುತ್ತಿದ್ದಂತೆ ಬಂಧಿಸುವ ನಿಟ್ಟಿನಲ್ಲಿ ಎಸ್ಐಟಿ ಸಿದ್ಧತೆ ನಡೆಸಿದೆ.