ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದ್ದು, ಅವರನ್ನು ಸಿಎಂ ಸಿದ್ದರಾಮಯಯ್ಯ ಸ್ವಾಗತ ಕೋರಿ ಬರ ಮಾಡಿಕೊಂಡರು.
ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಸಿಎಂ ಸಿದ್ದರಾಮಯ್ಯ ಆತ್ಮೀಯವಾಗಿ ಬರಮಾಡಿಕೊಂಡು, ಶುಭ ಹಾರೈಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಂಗಳೂರಿನಲ್ಲಿರುವ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ವಿವಿಧ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ನಂತರ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದು, ಅಲ್ಲಿ ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದಾರೆ. HAL ವಿಮಾನ ನಿಲ್ದಾಣದಿಂದ ನೇರವಾಗಿ ನಿಮ್ಹಾನ್ಸ್ ಆಸ್ಪತ್ರೆಯ ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ವಿವಿಧ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಬೆಳಗಾವಿಯಲ್ಲಿ ಕೆಎಲ್ಇ ಸಂಸ್ಥೆಯಿಂದ ನಿರ್ಮಿಸಿದ ಡಾ. ಸಂಪತ್ ಕುಮಾರ್ ಎಸ್. ಶಿವಣಗಿ ಕ್ಯಾನ್ಸರ್ ಆಸ್ಪತ್ರೆ ಲೋಕಾರ್ಪಣೆ ಕಾರ್ಯಕ್ರಮ ಜನವರಿ 3ರಂದು ಇಂದು ನಡೆಯಲಿದೆ.ಡಿಸೆಂಬರ್ 30ರಂದು ಆಸ್ಪತ್ರೆ ಉದ್ಘಾಟನೆ ದಿನಾಂಕ ನಿಗದಿಯಾಗಿತ್ತು. ಆದರೆ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಉದ್ಘಾಟನಾ ಸಮಾರಂಭವನ್ನು ಜನವರಿ 3ಕ್ಕೆ ಮುಂದೂಡಲಾಗಿತ್ತು. ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡು, ಶುಭ ಹಾರೈಸಿದೆ. pic.twitter.com/179eVEy78L
— Siddaramaiah (@siddaramaiah) January 3, 2025