ಉತ್ತರ ಪ್ರದೇಶ : ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯ ರಾಮ ಮಂದಿರ ತಲುಪಿದ್ದು, ಕೆಲವೇ ಕ್ಷಣಗಳಲ್ಲಿ ಧಾರ್ಮಿಕ ವಿಧಿ ವಿಧಾನ ಆರಂಭವಾಗಲಿದೆ.
ಅಯೋಧ್ಯೆಯ ಮಹರ್ಷಿ ವಾಲ್ಮೀಕಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ ಅವರು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ರಾಮ ಮಂದಿರದ ಆವರಣಕ್ಕೆ ಬಂದರು. ಕೆಲವೇ ಕ್ಷಣಗಳಲ್ಲಿ ಪ್ರಾಣಪ್ರತಿಷ್ಠಾಪನೆ ಪೂಜಾ ಕೈಂಕರ್ಯ ಆರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ದೆಹಲಿಯಿಂದ ನೇರವಾಗಿ ಅಯೋಧ್ಯೆಯ ಮಹರ್ಷಿ ವಾಲ್ಮೀಕಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ್ದರು. ನಂತರ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ನೇರವಾಗಿ ರಾಮಮಂದಿರಕ್ಕೆ ಆಗಮಿಸಿದ್ದಾರೆ.
ಇಂದು ಮಧ್ಯಾಹ್ನ 12:20 ಕ್ಕೆ ರಾಮಲಲ್ಲಾ ಪ್ರತಿಷ್ಠಾಪನಾ ಆಚರಣೆ ಪ್ರಾರಂಭವಾಗಲಿದೆ. ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಮುಖ್ಯ ಪೂಜೆಯನ್ನು ಅಭಿಜಿತ್ ಮುಹೂರ್ತದಲ್ಲಿ ಮಾಡಲಾಗುತ್ತದೆ. ರಾಮ್ ಲಲ್ಲಾ ಪ್ರತಿಷ್ಠಾಪನೆಯ ಸಮಯವನ್ನು ಕಾಶಿಯ ವಿದ್ವಾಂಸ ಗಣೇಶ ಶಾಸ್ತ್ರಿ ದ್ರಾವಿಡ್ ನಿಗದಿಪಡಿಸಿದ್ದಾರೆ. ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವು ಪೌಶ್ ತಿಂಗಳ ದ್ವಾದಶಿ ತಿಥಿಯಂದು (22 ಜನವರಿ 2024) ಅಭಿಜಿತ್ ಮುಹೂರ್ತ, ಮೇಷ ಲಗ್ನ, ಇಂದ್ರ ಯೋಗ, ವೃಶ್ಚಿಕ ನವವಂಶ ಮತ್ತು ಮೃಗಶಿರ ನಕ್ಷತ್ರದಲ್ಲಿ ನಡೆಯುತ್ತಿದೆ.