alex Certify BREAKING : ಟಿ- 20 ವಿಶ್ವಕಪ್ ಗೆದ್ದ ‘ಟೀಂ ಇಂಡಿಯಾ’ ಆಟಗಾರರನ್ನು ಸನ್ಮಾನಿಸಿದ ಪ್ರಧಾನಿ ಮೋದಿ |Video | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಟಿ- 20 ವಿಶ್ವಕಪ್ ಗೆದ್ದ ‘ಟೀಂ ಇಂಡಿಯಾ’ ಆಟಗಾರರನ್ನು ಸನ್ಮಾನಿಸಿದ ಪ್ರಧಾನಿ ಮೋದಿ |Video

ನವದೆಹಲಿ : ಟಿ20 ವಿಶ್ವಕಪ್ ಗೆದ್ದು ಭಾರತಕ್ಕೆ ಮರಳಿದ ಟೀ ಇಂಡಿಯಾ ಆಟಗಾರರು ಇಂದು ಪ್ರಧಾನಿ ಮೋದಿ ನಿವಾಸಕ್ಕೆ ಭೇಟಿ ನೀಡಿದ್ದು, ಪ್ರಧಾನಿ ಮೋದಿ ಅವರನ್ನು ಸನ್ಮಾನಿಸಿದ್ದಾರೆ.

ಪ್ರಧಾನಿ ಮೋದಿಯನ್ನು ಭೇಟಿಯಾದ ಆಟಗಾರರು ಅವರ ಜೊತೆ ಉಪಹಾರ ಸೇವಿಸಿದರು. ನಂತರ ವಿಶ್ವಕಪ್ ಹಿಡಿದು ಪ್ರಧಾನಿ ಮೋದಿ ಅವರ ಜೊತೆ ಕೆಲಹೊತ್ತು ಮಾತುಕತೆ ನಡೆಸಿದರು.

ಟೀಂ ಇಂಡಿಯಾ ಆಟಗಾರರಿಗೆ ಗುರುವಾರ ಸಂಜೆ ವಿಜಯಯಾತ್ರೆ ಆಯೋಜಿಸಲಾಗಿದೆ. ಮುಂಬೈನ ವಾಂಖಡಡೆ ಸ್ಟೇಡಿಯಂ ನಲ್ಲಿ ಸಂಜೆ 5 ಗಂಟೆಗೆ ಭಾರತ ತಂಡದ ಆಟಗಾರರನ್ನು ಅದ್ದೂರಿಯಾಗಿ ಸ್ವಾಗತಿಸಲಾಗುತ್ತಿದೆ.

ಟೀಮ್ ಇಂಡಿಯಾ ಆಟಗಾರರು ವಿಶ್ವಕಪ್ ನೊಂದಿಗೆ ಇಂದು ತವರಿಗೆ ಮರಳಿದ್ದು, ನವದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆಟಗಾರರಿಗೆ ಅದ್ದೂರಿ ಸ್ವಾಗತ ನೀಡಿ ವಿಜಯೋತ್ಸವ ಆಚರಿಸಲಾಗಿದೆ.ನಂತರ ಕೇಕ್ ಕತ್ತರಿಸಿ ಆಟಗಾರರು ಸಂಭ್ರಮಾರಣೆ ನಡೆಸಿದರು. ನಂತರ ಇಂದು ಟೀಂ ಇಂಡಿಯಾ ಆಟಗಾರರು ಪ್ರಧಾನಿ ಮೋದಿ ನಿವಾಸಕ್ಕೆ ಆಗಮಿಸಿದ್ದಾರೆ.

ಜೂನ್ 29 ರಂದು, ಐಸಿಸಿ ಪುರುಷರ T20 ವಿಶ್ವಕಪ್ 2024 ಫೈನಲ್ನಲ್ಲಿ ಭಾರತವು ಬಾರ್ಬಡೋಸ್ನಲ್ಲಿ ಏಡೆನ್ ಮಾರ್ಕ್ರಾಮ್ ನೇತೃತ್ವದ ದಕ್ಷಿಣ ಆಫ್ರಿಕಾವನ್ನು ಏಳು ರನ್ಗಳಿಂದ ಸೋಲಿಸಿತು.ಆಟಗಾರರು, ತರಬೇತುದಾರರು, ಸಹಾಯಕ ಸಿಬ್ಬಂದಿ ಮತ್ತು ಇತರ ಸದಸ್ಯರು ಬಾರ್ಬಡೋಸ್ನಿಂದ ಆಗಮಿಸಿದ್ದಾರೆ. ಜೂನ್ 30 ರಿಂದ ಬೆರಿಲ್ ಚಂಡಮಾರುತದ ಕಾರಣದಿಂದಾಗಿ ಆಗಮನ ವಿಳಂಬವಾಗಿತ್ತು.ಚಂಡಮಾರುತ ದಿಂದಾಗಿ ಬಾರ್ಬಡೋಸ್ ನಲ್ಲಿ ಟೀಮ್ ಇಂಡಿಯಾ ಆಟಗಾರರು ಉಳಿದುಕೊಂಡಿದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...