ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ಜನವರಿ 19 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.
ಜ.19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಎರಡು ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದು, ಮೆಗಾ ರೋಡ್ ಶೋ ಕೂಡ ನಡೆಸುವ ಸಾಧ್ಯತೆಯಿದೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಜನವರಿ 19ರಂದು ನಿಗದಿಯಾಗಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆ ಮುಂದೂಡಿಕೆಯಾಗಿದೆ. ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆಯೇ ಪ್ರಧಾನಿ ಬೆಂಗಳೂರಿಗೆ ಬರುತ್ತಿದ್ದಾರೆ. ಆದರೆ, ರೋಡ್ ಶೋ ಸಂಬಂಧ ಬಿಜೆಪಿಯ ನಾಯಕರು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
ಖೇಲೋ ಇಂಡಿಯಾ ಹಾಗೂ ಏರೋನಾಟಿಕ್ಸ್ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ತೆರಳುವ ವೇಳೆ ಪ್ರಧಾನಿ ಮೋದಿ ಅವರು ಬೆಂಗಳೂರಿಗೂ ಭೇಟಿ ನೀಡಲಿದ್ದಾರೆ.