alex Certify BREAKING : ಜ.19 ರಂದು ಬೆಂಗಳೂರಿಗೆ ‘ಪ್ರಧಾನಿ ಮೋದಿ’ ಭೇಟಿ : ಮೆಗಾ ‘ರೋಡ್ ಶೋ’ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಜ.19 ರಂದು ಬೆಂಗಳೂರಿಗೆ ‘ಪ್ರಧಾನಿ ಮೋದಿ’ ಭೇಟಿ : ಮೆಗಾ ‘ರೋಡ್ ಶೋ’ ಸಾಧ್ಯತೆ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿದ್ದು, ಜನವರಿ 19 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

ಜ.19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಎರಡು ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದು, ಮೆಗಾ ರೋಡ್ ಶೋ ಕೂಡ ನಡೆಸುವ ಸಾಧ್ಯತೆಯಿದೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಜನವರಿ 19ರಂದು ನಿಗದಿಯಾಗಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆ ಮುಂದೂಡಿಕೆಯಾಗಿದೆ. ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆಯೇ ಪ್ರಧಾನಿ ಬೆಂಗಳೂರಿಗೆ ಬರುತ್ತಿದ್ದಾರೆ. ಆದರೆ, ರೋಡ್ ಶೋ ಸಂಬಂಧ ಬಿಜೆಪಿಯ ನಾಯಕರು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಖೇಲೋ ಇಂಡಿಯಾ ಹಾಗೂ ಏರೋನಾಟಿಕ್ಸ್ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ತೆರಳುವ ವೇಳೆ ಪ್ರಧಾನಿ ಮೋದಿ ಅವರು ಬೆಂಗಳೂರಿಗೂ ಭೇಟಿ ನೀಡಲಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...