ತುಮಕೂರು : ಡಿವೈಡರ್ ಗೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ ಹೊಡೆದು ಸ್ಥಳದಲ್ಲೇ ಚಾಲಕ ಮೃತಪಟ್ಟ ತುಮಕೂರು ಜಿಲ್ಲೆಯ ಕುಣಿಗಲ್ ನಲ್ಲಿ ನಡೆದಿದೆ.
ಮೃತರನ್ನು ಖಾಸಗಿ ಬಸ್ ಚಾಲಕ ಇಬ್ರಾಹಿಂ (42) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ನಾಲ್ವರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ನಡೆದ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಚಾಲಕನ ನಿಯಂತ್ರಣ ತಪ್ಪಿ ಅಪಘಾತ ನಡೆದಿರಬಹುದೆಂದು ಶಂಕಿಸಲಾಗಿದೆ.