ನವದೆಹಲಿ : ವಯನಾಡು ನೂತನ ಸಂಸದೆಯಾಗಿ ಪ್ರಿಯಾಂಗಾ ಗಾಂಧಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಸಂವಿಧಾನದ ಪುಸ್ತಕವನ್ನು ಕೈಯಲ್ಲಿ ಹಿಡಿದು ಪ್ರಿಯಾಂಕಾ ಗಾಂಧಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಲೋಕಸಭೆಯ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭಾರತೀಯ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ಸತ್ಯನ್ ಮೊಕೇರಿ ಅವರನ್ನು 4,10,931 ಮತಗಳ ಅಂತರದಿಂದ ಸೋಲಿಸಿದ್ದಾರೆ.
ಕಾಂಗ್ರೆಸ್ ಭದ್ರಕೋಟೆಯಾಗಿರುವ ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ, ಬಿಜೆಪಿಯ ನವ್ಯಾ ಹರಿದಾಸ್ ಮತ್ತು ಸಿಪಿಐನ ಸತ್ಯನ್ ಮೊಕೇರಿ ನಡುವೆ ತ್ರಿಕೋನ ಸ್ಪರ್ಧೆ ಇತ್ತು.ಏತನ್ಮಧ್ಯೆ, ಕಾಂಗ್ರೆಸ್ ಮುಖಂಡ ರವೀಂದ್ರ ವಸಂತರಾವ್ ಚವಾಣ್ ಅವರು ಲೋಕಸಭೆಯಲ್ಲಿ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನಾಂದೇಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನ ರವೀಂದ್ರ ವಸಂತರಾವ್ ಚವಾಣ್ 5,86,788 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಹಾಲಿ ಕಾಂಗ್ರೆಸ್ ಸಂಸದ ವಸಂತರಾವ್ ಬಲವಂತರಾವ್ ಚವಾಣ್ ಅವರ ನಿಧನದಿಂದಾಗಿ ಈ ಸ್ಥಾನ ತೆರವಾಗಿತ್ತು.
#WATCH | Congress leader Priyanka Gandhi Vadra takes oath as Member of Parliament in Lok Sabha
(Video source: Sansad TV/YouTube) pic.twitter.com/eaLJzpTY2y
— ANI (@ANI) November 28, 2024