ಬೆಂಗಳೂರು : ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ, ವಿಡಿಯೋ ಚಿತ್ರೀಕರಣ ನಿಷೇಧಗೊಳಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ.
ರಾಜ್ಯಾದ್ಯಂತ ಎಲ್ಲಾ ಜಿಲ್ಲೆ, ತಾಲ್ಲೂಕು ಹಾಗೂ ರಾಜ್ಯ ಮಟ್ಟದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅವರ ಕೆಲಸ ಕಾರ್ಯಗಳ ನಿಮಿತ್ತ ಆಗಮಿಸುವುದು ಸರ್ವೇಸಾಮಾನ್ಯವಾಗಿದ್ದು ಕೆಲವು ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಗಳಿಗೆ ಕಚೇರಿ ವೇಳೆಯಲ್ಲಿ ಬಂದು ಕಚೇರಿಯ ಫೋಟೋ/ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಹಾಗೂ ಇಂತಹ ಫೋಟೋ/ವಿಡಿಯೋಗಳನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಇಲಾಖೆ ಸರ್ಕಾರದ ಘನತೆಗೆ ಕುಂದುಂಟಾಗುತ್ತಿರುವುದು ಹಾಗೂ ಅದರಲ್ಲೂ ವಿಶೇಷವಾಗಿ ಮಹಿಳಾ ನೌಕರರಿಗೆ ಸಮಸ್ಯೆ ಉಂಟಾಗುತ್ತಿರುವುದರಿಂದ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ / ವಿಡಿಯೋ ಮಾಡದಂತೆ ಆದೇಶಿಸಲಾಗಿತ್ತು.ಇದೀಗ ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ, ವಿಡಿಯೋ ಚಿತ್ರೀಕರಣ ನಿಷೇಧಗೊಳಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ.