ಬೆಂಗಳೂರು : ದೊಡ್ಡಗುಂಟಾದಲ್ಲಿ ದಸರಾ ಮಹೋತ್ಸವ ನಡೆಯುವ ಹಿನ್ನೆಲೆ ಪುಲಿಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ (ನಿಷೇಧಾಜ್ಞೆ) ಗೊಳಿಸಿ ಆದೇಶ ಹೊರಡಿಸಲಾಗಿದೆ.
ನಾಳೆ(ನ.05) ಸಂಜೆ 6 ಗಂಟೆಯವರೆಗೆ 144 ಸೆಕ್ಷನ್ ಜಾರಿ ಮಾಡಿ ಪೊಲೀಸ್ ಆಯುಕ್ತ ದಯಾನಂದ ಆದೇಶ ಹೊರಡಿಸಿದ್ದಾರೆ. ಹಾಗೂ ಜೊತೆಗೆ ಬೆಳಗ್ಗೆ 6 ಗಂಟೆಯಿಂದ ನಾಳೆ ಸಂಜೆ 6ರವರೆಗೆ ಮದ್ಯಮಾರಾಟವನ್ನು ನಿಷೇಧಗೊಳಿಸಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ದಸರಾ ಹಬ್ಬದ ಪಲ್ಲಕ್ಕಿ ಉತ್ಸವದಲ್ಲಿ ಮುಸ್ಲಿಂ ಸಂಖ್ಯೆ ಹೆಚ್ಚಿರುವ ಈ ಪ್ರದೇಶದಲ್ಲಿ ಕೋಮು ಗಲಭೆ ಉಂಟಾಗುವ ಮುನ್ಸೂಚನೆಯನ್ನು ಅರಿತ ಪೊಲೀಸ್ ಇಲಾಖೆಯು 144 ಸೆಕ್ಷನ್ (ನಿಷೇಧಾಜ್ಷೆ) ಜಾರಿಗೊಳಿಸಿ ಆದೇಶಿಸಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ನಾಳೆ ಸಂಜೆ 5 ಗಂಟೆಯವರೆಗೆ 144 ಸೆಕ್ಷನ್ ಜಾರಿಯಲ್ಲಿ ಇರಲಿದೆ. ದಸರಾ ಪಲ್ಲಕ್ಕಿ ಉತ್ಸವ ಪೂರ್ಣಗೊಳ್ಳುವವರೆಗೂ ಪುಲಿಕೇಶಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ, ಅನ್ಯ ಕೋಮಿನ ಜನರು ಗುಂಪು ಗೂಡುವುದನ್ನು ನಿಷೇಧಿಸಲಾಗಿದೆ.