ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ತುರ್ತುಸುದ್ದಿಗೋಷ್ಟಿ ಕರೆದಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಧ್ಯಾಹ್ನ 1 :15 ಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ತುರ್ತುಸುದ್ದಿಗೋಷ್ಟಿ ಕರೆದಿದ್ದು, ಬಹಳ ಕುತೂಹಲ ಮೂಡಿಸಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17 ಮತ್ತು ಭಾರತ್ ನ್ಯಾಯ ಸಂಹಿತಾದ ಸೆಕ್ಷನ್ 18 ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲು ಗೆಹ್ಲೋಟ್ ಅನುಮತಿ ನೀಡಿದ್ದಾರೆ.