ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆ ರಾಜ್ಯಾದ್ಯಂತ ಸೋಮವಾರ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿದೆ ಎಂದು ತಿಳಿದು ಬಂದಿದೆ.
ಮುಡಾ ಹಗರಣ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲರು ಶನಿವಾರ ಅನುಮತಿ ನೀಡಿದ್ದು, ಈ ವಿಚಾರ ಕಾಂಗ್ರೆಸ್ಸಿಗರನ್ನು ಕೆರಳಿಸಿದೆ. ಇದು ಬಹಳ ದೊಡ್ಡ ಷಡ್ಯಂತ್ರ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ವಾಗ್ಧಾಳಿ ನಡೆಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನಲೆಯಲ್ಲಿ ರಾಜ್ಯಪಾಲರ ಕ್ರಮ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಕಾಂಗ್ರೆಸ್ ನಾಯಕರು, ಹಿಂದುಳಿದ ವರ್ಗಗಳ ವೇದಿಕೆ, ಕುರುಬರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಹೋರಾಟ ಆರಂಭಿಸಿದ್ದಾರೆ.