ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಸಿಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ ನಡೆಸಿದ ನೂರಾರು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹನುಮಂತಪ್ಪ ಸರ್ಕಲ್ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಹನುಮಂತಪ್ಪ ವೃತ್ತದಲ್ಲಿ 100 ಕ್ಕೂ ಪೊಲೀಸರನ್ನು ನಿಯೋಜಿಸಲಾಗಿದೆ.ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಸುವರ್ಣಸೌಧದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಲಾಗಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಸಿ ಬಂಧನಕ್ಕೊಳಗಾಗಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬೆಂಗಳೂರಿಗೆ ಸ್ಥಳಾಂತರಿಸುವ ಸಾಧ್ಯತೆ ಇದೆ. ಲೀಸರು ಸಿ.ಟಿ. ರವಿ ಅವರನ್ನು ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದುಕೊಂಡು ಹೋಗಲಿದ್ದಾರೆ ಹೇಳಲಾಗಿದೆ.