ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ 545 ಪಿಎಸ್ಐ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗಿದೆ. 545 ಪಿಎಸ್ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಸಲಾಗಿತ್ತು. ಇದರಲ್ಲಿ 545 ಪಿಎಸ್ಐ ಹುದ್ದೆಗಳ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ಸರ್ಕಾರ ಸೋಮವಾರ ಬಿಡುಗಡೆ ಮಾಡಿದೆ.
ದಿನಾಂಕ: 06.06.2020 ರ ಸುತ್ತೋಲೆ ಅನ್ವಯ ಆಯ್ಕೆ ಪಟ್ಟಿಯಿಂದ ಹೊರಗುಳಿಯುವ 40 ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗನುಗುಣವಾಗಿ 40 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ವೃಂದದಲ್ಲಿ ಕಾಯ್ದಿರಿಸಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಆಯ್ಕೆ ಪಟ್ಟಿಯನ್ನು ಪ್ರಕಟಿಸುವ ಸಂದರ್ಭದಲ್ಲಿ ಈ ಆಯ್ಕೆ ಪಟ್ಟಿಯು ಮಾನ್ಯ ಉಚ್ಚ ನ್ಯಾಯಾಲಯವು ಪಿಟಿಷನ್ 20:16343/202400 ನೀಡುವ ತೀರ್ಪಿಗೊಳಪಟ್ಟಿರುತ್ತದೆಂದು ಹಾಗೂ ಈ ಆಯ್ಕೆ ಪಟ್ಟಿಯಲ್ಲಿ ವೃಂದ ಬದಲಾವಣೆ, ಮೀಸಲಾತಿ ಪ್ರವರ್ಗ ಬದಲಾವಣೆ, ಅರ್ಹತಾ ಪಟ್ಟಿಯಲ್ಲಿನ ಸ್ಥಾನ ಮತ್ತು ಘಟಕಗಳ ಬದಲಾವಣೆ ಆಗುವ ಸಾಧ್ಯತೆಗೊಳಪಟ್ಟಿರುತ್ತದೆ ಎಂಬ ಷರತ್ತುಗಳನ್ನು ವಿಧಿಸಲಾಗಿದೆ.





