alex Certify BREAKING : ರಾಜ್ಯದ ಎಲ್ಲಾ ತಾಲೂಕುಗಳಿಗೂ ಪುನೀತ್ ರಾಜ್’ಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆ : ಸಚಿವ ದಿನೇಶ್ ಗುಂಡೂರಾವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯದ ಎಲ್ಲಾ ತಾಲೂಕುಗಳಿಗೂ ಪುನೀತ್ ರಾಜ್’ಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆ : ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ : ರಾಜ್ಯದ ಎಲ್ಲಾ ತಾಲೂಕುಗಳಿಗೂ ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು   ಡಯಾಲಿಸಿಸ್ ಕೇಂದ್ರಗಳನ್ನು ಬದಲಾವಣೆ ಮಾಡಲಾಗಿದೆ. ಇದಕ್ಕೆ ಸದ್ಯದಲ್ಲೇ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಎಲ್ಲಾ ಜಿಲ್ಲಾಕೇಂದ್ರಗಳಲ್ಲಿ  ಟೇಕ್ ಕೇರ್ ಕೀಮೋಥೆರಪಿ ಆರಂಭಿಸಲಾಗುತ್ತಿದೆ. ರಾಜ್ಯದ ಎಲ್ಲಾ ತಾಲೂಕುಗಳಿಗೂ ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗನಕಾಯಿಲೆ ಉಚಿತ ಚಿಕಿತ್ಸೆ

ಮಲೆನಾಡು ಭಾಗಗಳಲ್ಲಿ ಹೆಚ್ಚು ಕಾಡುತ್ತಿರುವ ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆಎಫ್ಡಿ) ನಿಯಂತ್ರಣಕ್ಕೆ ನಮ್ಮ ಸರ್ಕಾರ ಸರ್ವ ಪ್ರಯತ್ನಗಳನ್ನು ನಡೆಸುತ್ತಿದೆ. ರೋಗದಿಂದ ಬಾಧಿತರಾದವರಿಗೆ ಚಿಕಿತ್ಸೆ ಉಚಿತವಾಗಿದ್ದು, ಈ ಯೋಜನೆಯನ್ನು ಎಪಿಎಲ್ ಕುಟುಂಬಗಳಿಗೂ ವಿಸ್ತರಿಸಲಾಗಿದೆ. ರಾಜ್ಯದಲ್ಲಿ ಕೆಎಫ್ಡಿ ಬಾಧಿತ ಎಪಿಎಲ್ ಕುಟುಂಬದ ಸದಸ್ಯರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿ ನೋಂದಾಯಿಸಿಕೊಂಡಿರುವ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ದೊರೆಯಲಿದೆ. ಇದರಿಂದ ನೂರಾರು ಕುಟುಂಬಗಳಿಗೆ ಸಹಾಯವಾಗಲಿದೆ. ಈಗಾಗಲೇ ಮಂಗನ ಕಾಯಿಲೆ ವಿರುದ್ಧ ನಿರ್ಣಾಯಕ ಹೆಜ್ಜೆಯಿಟ್ಟಿರುವ ನಮ್ಮ ಸರ್ಕಾರ ಐಸಿಎಂಆರ್ ಜೊತೆಗೆ ಚರ್ಚೆ ನಡೆಸಿದ್ದು, ಪ್ರಯೋಗಗಳ ಬಳಿಕ 2026ರ ವೇಳೆಗೆ ಕೆಎಫ್ಡಿ ಲಸಿಕೆ ಸಿಗಲಿದೆ. ರಾಜ್ಯದ ಜನರ ಆರೋಗ್ಯ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...