ಶಿವಮೊಗ್ಗ : ಪ್ರೇಮಿಗಳ ನಡುವೆ ಕಿರಿಕ್ ನಡೆದು ಯುವಕ ಯುವತಿಗೆ ಚಾಕು ಇರಿದ ಘಟನೆ ಶಿವಮೊಗ್ಗದ ಶಿವಪ್ಪನಾಯಕ ವೃತ್ತದ ಬಳಿ ನಡೆದಿದೆ.
ಯಾವುದೋ ವಿಚಾರಕ್ಕೆ ಯುವಕ-ಯುವತಿಯ ನಡುವೆ ಜಗಳ ನಡೆದಿದೆ. ಜಗಳ ತಾರಕಕ್ಕೇರಿದ್ದು ಸಿಟ್ಟಿಗೆದ್ದ ಯುವಕ ಯುವತಿಗೆ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಹಿನ್ನೆಲೆ ರೊಚ್ಚಿಗೆದ್ದ ಸಾರ್ವಜನಿಕರು ಯುವಕನಿಗೆ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ನಂತರ ಧರ್ಮದೇಟು ತಿಂದ ಯುವಕನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.