ನವದೆಹಲಿ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಗುತ್ತಿಗೆ ಅವಧಿಯನ್ನು ವಿಸ್ತರಿಸಲಾಗಿದ್ದು, ವಿಕ್ರಮ್ ರಾಥೋರ್ ಅವರನ್ನು ಬ್ಯಾಟಿಂಗ್ ಕೋಚ್ ಆಗಿ, ಪರಾಸ್ ಮಾಂಬ್ರೆ ಅವರನ್ನು ಬೌಲಿಂಗ್ ಕೋಚ್ ಆಗಿ ಮತ್ತು ಟಿ ದಿಲೀಪ್ ಅವರನ್ನು ಫೀಲ್ಡಿಂಗ್ ಕೋಚ್ ಆಗಿ ಮುಂದುವರಿಸಲಾಗಿದೆ.
ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ಸಹಾಯಕ ಸಿಬ್ಬಂದಿಯ ಒಪ್ಪಂದವನ್ನು ವಿಸ್ತರಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಬುಧವಾರ ಪ್ರಕಟಿಸಿದೆ.
ಇತ್ತೀಚೆಗೆ ಮುಕ್ತಾಯಗೊಂಡ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ರ ನಂತರ ರಾಹುಲ್ ದ್ರಾವಿಡ್ ಅವರ ಒಪ್ಪಂದದ ಅವಧಿ ಮುಗಿದ ನಂತರ ಅವರೊಂದಿಗೆ ಫಲಪ್ರದ ಚರ್ಚೆಯಲ್ಲಿ ತೊಡಗಿದೆ ಮತ್ತು ಅಧಿಕಾರಾವಧಿಯನ್ನು ಮುಂದುವರಿಸಲು ಸರ್ವಾನುಮತದಿಂದ ಒಪ್ಪಿಕೊಂಡಿದೆ ಎಂದು ಬಿಸಿಸಿಐ ತಿಳಿಸಿದೆ.