
ನವದೆಹಲಿ: 18ನೇ ಲೋಕಸಭೆಯಲ್ಲಿ ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಲಿದ್ದಾರೆ ಎಂದು ಕಾಂಗ್ರೆಸ್ ಮಂಗಳವಾರ ಘೋಷಿಸಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಡೆದ I.N.D.I.A. ಮೈತ್ರಿಕೂಟದ ನಾಯಕರ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ವಿರೋದ ಪಕ್ಷದ ನಾಯಕರನ್ನಾಗಿ ನೇಮಿಸಲಾಗಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.