ಬೆಂಗಳೂರು : ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡಪರಹೋರಾಟಗಾರ ವಾಟಾಳ್ ನಾಗರಾಜ್ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದು ಬಸ್ ನಲ್ಲಿ ಪೊಲೀಸರು ಕರೆದೊಯ್ದಿದ್ದಾರೆ.
ರಾಜಭವನಕ್ಕೆ ಕನ್ನಡಪರ ಹೋರಾಟಗಾರರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ನಾವು ಮುತ್ತಿಗೆ ಹಾಕಲು ಬಂದಿಲ್ಲ, ಮನವಿ ಕೊಡಲು ಮುಂದಿದ್ದೇನೆ ಎಂದು ಕನ್ನಡಪರ ಹೋರಾಟಗಾರರು ಪೊಲೀಸರ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದಿನಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಿದೆ.
ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರ ಹಲ್ಲೆ ಪ್ರಕರಣ ಖಂಡಿಸಿ ಕನ್ನಡಪರ ಸಂಘಟನೆಗಳು ಸಿಡಿದೆದ್ದಿದ್ದು, ಮಾ.22 ರಂದು ಅಖಂಡ ಕರ್ನಾಟಕ ಬಂದ್ ಹೋರಾಟಕ್ಕೆ ಕರೆ ನೀಡಿದೆ.ಮಹಾರಾಷ್ಟ್ರದಲ್ಲಿ ಕನ್ನಡಿಗರು, ಕರ್ನಾಟಕದ ಬಸ್ ಮೇಲೆ ನಡೆದ ಪುಂಡಾಟಿಕೆ ಹಾಗೂ ಕಂಡಕ್ಟರ್ , ಚಾಲಕರ ಮೇಲೆ ನಡೆಸಿದ ಹಲ್ಲೆ ಖಂಡಿಸಿ ಕನ್ನಡಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದೆ.ಕಂಡಕ್ಟರ್ ಮೇಲೆ ಹಲ್ಲೆ ಖಂದಿಸಿ ಮಾರ್ಚ್ 7ರಂದು ಬೆಳಗಾವಿ ಚಲೋಗೆ ತೀರ್ಮಾನಿಸಲಾಗಿದೆ. ಮಾರ್ಚ್ 11ರಂದು ಅತ್ತಿಬೆಲೆ ಗಡಿ ಬಂದ್ ಹೋರಾಟಕ್ಕೆ ಕರೆ ನೀಡಲಾಗಿದೆ. ಮಾರ್ಚ್ 16ರಂದು ಹೊಸಕೋಟೆ ಟೋಲ್ ಬಂದ್ ಗೆ ನಿರ್ಧರಿಸಲಾಗಿದೆ. ಮೇಕೆದಾಟು ಯೋಜನೆಗೆ ಆಗ್ರಹಿಸಿ ಈ ಬಂದ್ ಕರೆ ನೀಡಲಾಗಿದೆ..