ಬೆಂಗಳೂರು : ರಾಜ್ಯಸಭೆ ಚುನಾವಣೆಯ ಮತದಾನದ ಸಮಯ ಮುಕ್ತಾಯವಾಗಿದ್ದು, ಇದುವರೆಗೆ 222 ಮಂದಿ ಶಾಸಕರು ಮತದಾನ ಮಾಡಿದ್ದಾರೆ.
ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿಧಾನಸೌಧದ ಕೊಠಡಿ ಸಂಖ್ಯೆ 6 ರಲ್ಲಿ ಮತದಾನ ನಡೆದಿತ್ತು, 223 ಮತಗಳ ಪೈಕಿ 222 ಮಂದಿ ಮತದಾನ ಮಾಡಿದ್ದಾರೆ. ಶಾಸಕ ಶಿವರಾಜ್ ಹೆಬ್ಬಾರ್ ಮಾತ್ರ ಮತದಾನ ಮಾಡಿಲ್ಲ ಎಂಬುದಾಗಿ ತಿಳಿದು ಬಂದಿದೆ.
ಕಾಂಗ್ರೆಸ್ ನ 137 ಶಾಸಕರು, ಬಿಜೆಪಿಯ 65, ಜೆಡಿಎಸ್ ನ 19 ಮಂದಿ ಹಾಗೂ ಪಕ್ಷೇತರರ ನಾಲ್ವರು ಮಂದಿ ಶಾಸಕರು ಮತ ಚಲಾಯಿಸಿದ್ದಾರೆ.
ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್ ಸಿ ಸೋಮಶೇಖರ್ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿರುವುದು ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಸೋಮಶೇಖರ್ ಕಾಂಗ್ರೆಸ್ ಗೆ ಮತ ಚಲಾಯಿಸಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ.