alex Certify BREAKING : ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಗೆ ಶಾಕ್ ಕೊಟ್ಟ ಶಾಸಕ ಎಸ್.ಟಿ. ಸೋಮಶೇಖರ್ : ಕಾಂಗ್ರೆಸ್‌ ಪರ ಮತ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಗೆ ಶಾಕ್ ಕೊಟ್ಟ ಶಾಸಕ ಎಸ್.ಟಿ. ಸೋಮಶೇಖರ್ : ಕಾಂಗ್ರೆಸ್‌ ಪರ ಮತ!

ಬೆಂಗಳೂರು : ಇಂದು ರಾಜ್ಯದ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಬಿಜೆಪಿಗೆ ಶಾಸಕ ಎಸ್.ಟಿ. ಸೋಮಶೇಖರ್‌ ಶಾಕ್‌ ಕೊಟ್ಟಿದ್ದಾರೆ.

ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್‌ ಅಡ್ಡಮತದಾನ ಮಾಡಿದ್ದು, ಕಾಂಗ್ರೆಸ್‌ ಪರ ಚಲಾಯಿಸಿದ್ದಾರೆ. ಈ ಮೂಲಕ ಬಿಜೆಪಿಗೆ ಬಿಗ್‌ ಶಾಕ್‌ ಕೊಟ್ಟಿದ್ದಾರೆ.

ಮತದಾನಕ್ಕೂ ಮುನ್ನ ಮಾತನಾಡಿದ ಶಾಸಕ ಎಸ್.ಟಿ. ಸೋಮಶೇಖರ್‌, ಅನುದಾನ ಕೊಟ್ಟವರಿಗೆ ಮೊದಲ ಪ್ರಾಶಸ್ತ್ಯದ ವೋಟ್. ಕಳೆದ 6 ವರ್ಷಗಳಿಂದ ಇದೆಲ್ಲವನ್ನೂ ನೋಡುತ್ತಿದ್ದೇನೆ. ಎಲ್ಲರೂ ಅನುದಾನ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ ಹೊರತು ಯಾರೊಬ್ಬರೂ ಕ್ಷೇತ್ರಕ್ಕೆ ಅನುದಾನ ಕೊಟ್ಟಿಲ್ಲ. ಹಾಗಾಗಿ ಈ ಬಾರಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಯಾರೇ ಆಗಲಿ ಯಾರು ನನ್ನ ಕ್ಷೇತ್ರಕ್ಕೆ ಅನುದಾನ ಕೊಡುವುದಾಗಿ ಭರವಸೆ ಕೊಡುತ್ತಾರೋ ಅವರಿಗೆ ನನ್ನ ವೋಟ್ ಇದರಲ್ಲಿ ಮುಚ್ಚುಮರೆ ಇಲ್ಲ ಎಂದು ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...