ಬೆಂಗಳೂರು : ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ಎನ್ ಐ ಎ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 10 ದಿನದ ಹಿಂದೆ ಬೆಳ್ಳಂ ಬೆಳಗ್ಗೆ ಎನ್ ಐ ಎ ಅಧಿಕಾರಿಗಳು ಹಲವು ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ನಡೆಸಿದ್ದರು. ಈ ಬೆನ್ನಲ್ಲೇ ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ಎನ್ ಐ ಎ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿಗೂ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೂ ಲಿಂಕ್ ಇದೆ ಎಂದು ಹೇಳಲಾಗಿದ್ದು, ತನಿಖೆಯಿಂದಷ್ಟೇ ನಿಖರವಾದ ಸತ್ಯ ಹೊರ ಬೀಳಲಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಮಾರ್ಚ್ 1 ರಂದು ಬೆಂಗಳೂರಿನ ವೈಟ್ ಫೀಲ್ಡ್ ಪ್ರದೇಶದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ ಒಂಬತ್ತು ಜನರು ಗಾಯಗೊಂಡಿದ್ದು, ಒಂದು ವಾರದ ನಂತರ ಮಾರ್ಚ್ 9 ರ ಶನಿವಾರ ಬೆಳಗ್ಗೆ 6 ಗಂಟೆಯಿಂದ ಬೆಂಗಳೂರಿನ ಕೆಫೆ ಆರಂಭವಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ಪ್ರದೇಶದಲ್ಲಿರುವ ರಾಮೇಶ್ವರಂ ಕೆಫೆ ಬೆಂಗಳೂರಿನಲ್ಲಿರುವ ಬಹಳ ಜನಪ್ರಿಯ ಕೆಫೆಯಾಗಿದೆ.