ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಶಂಕಿತ ಆರೋಪಿಗನ್ನು ಎನ್ ಐ ಎ ಅಧಿಕಾರಿಗಳು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಇಬ್ಬರು ಶಂಕಿತ ಆರೋಪಿಗನ್ನು ಎನ್ ಐ ಎ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣ ಸಂಬಂಧ ಹಲವರನ್ನು ವಶಕ್ಕೆ ಪಡೆದ ಎನ್ ಐ ಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಮಾಜ್ ಮುನೀರ್ ಕೃತ್ಯ ಧೃಡವಾಗಿದ್ದು, ಈತನೇ ಪ್ರಕರಣದ ಎ 1 ಆರೋಪಿಯಾಗಿದ್ದಾನೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಮಾರ್ಚ್ 1 ರಂದು ಬೆಂಗಳೂರಿನ ವೈಟ್ ಫೀಲ್ಡ್ ಪ್ರದೇಶದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ ಒಂಬತ್ತು ಜನರು ಗಾಯಗೊಂಡಿದ್ದು, ಒಂದು ವಾರದ ನಂತರ ಮಾರ್ಚ್ 9 ರ ಶನಿವಾರ ಬೆಳಗ್ಗೆ 6 ಗಂಟೆಯಿಂದ ಬೆಂಗಳೂರಿನ ಕೆಫೆ ಆರಂಭವಾಗಿತ್ತು.