ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖೆ ರಾಷ್ಟ್ರೀಯ ತನಿಖಾ ದಳಕ್ಕೆ( ಎನ್ ಐ ಎ) ವರ್ಗಾವಣೆಯಾಗಿದೆ.
ಪ್ರಕರಣದ ಗಂಭೀರತೆ ಅರಿತ ಎನ್ಐಎ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದು, ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಿ ಎಫ್ಐಆರ್ ದಾಖಲಿಸಿದ ಎನ್ಐಎ ಇಂದಿನಿಂದ ಸ್ಫೋಟದ ಸಂಪೂರ್ಣ ತನಿಖೆ ಆರಂಭಿಸಲಿದೆ.
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಆರೋಪಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಅಗತ್ಯ ಬಿದ್ದರೆ ಎನ್.ಐ.ಎ ಗೆ ವಹಿಸುವ ಬಗ್ಗೆಯೂ ಚಿಂತನೆ ನಡೆಸಲಾಗುವುದು. ಬಾಂಬ್ ಸ್ಫೋಟದಂತಹ ಪ್ರಕರಣಗಳು ಸಣ್ಣ ಘಟನೆಗಳಾಗುವುದಿಲ್ಲ. ಜನರ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದು ಸಿಎಂ ಸಿದ್ದರಾಮಯ್ಯ ನಿನ್ನೆ ಹೇಳಿದ್ದರು.