alex Certify BREAKING : ರಾಮಲಲ್ಲಾ ಪ್ರತಿಷ್ಟಾಪನೆ ; ಶಿವಮೊಗ್ಗದಲ್ಲಿ ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ ಮುಸ್ಲಿಂ ಮಹಿಳೆ ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಮಲಲ್ಲಾ ಪ್ರತಿಷ್ಟಾಪನೆ ; ಶಿವಮೊಗ್ಗದಲ್ಲಿ ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ ಮುಸ್ಲಿಂ ಮಹಿಳೆ ಪೊಲೀಸ್ ವಶಕ್ಕೆ

ಶಿವಮೊಗ್ಗ : ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯುತ್ತಿದ್ದು, ದೇಶದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಈ ಸಂಭ್ರಮದ ಹಿನ್ನೆಲೆ ಸಿಹಿ ಹಂಚುವ ವೇಳೆ ಮುಸ್ಲಿಂ ಮಹಿಳೆಯೊಬ್ಬರು ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗದ ಶಿವಪ್ಪ ನಾಯಕ ವೃತ್ತದಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಸಿಹಿ ಹಂಚಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಮುಸ್ಲಿಂ ಮಹಿಳೆಯೊಬ್ಬರು ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದಾರೆ.

ಇಷ್ಟೇ ಅಲ್ಲದೇ ನೀವು ಮೋದಿ ಪರ ಕೆಲಸ ಮಾಡ್ತೀರಾ ಎಂದು ಪೊಲೀಸರ ವಿರುದ್ಧವೇ ಕೂಗಾಟ ನಡೆಸಿದ್ದಾರೆ. ಕೂಡಲೇ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...