alex Certify BREAKING : ‘ಅತ್ಯಾಚಾರ’ ಆರೋಪ ಪ್ರಕರಣ : ಶಾಸಕ ‘ಮುನಿರತ್ನ’ಗೆ 14 ದಿನ ನ್ಯಾಯಾಂಗ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಅತ್ಯಾಚಾರ’ ಆರೋಪ ಪ್ರಕರಣ : ಶಾಸಕ ‘ಮುನಿರತ್ನ’ಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ಅತ್ಯಾಚಾರ ಆರೋಪ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ಈ ಆದೇಶ ಹೊರಡಿಸಿದ್ದು, 14 ದಿನ ನ್ಯಾಯಾಂಗ ಬಂಧನ ಫಿಕ್ಸ್ ಆಗಿದೆ.

ಇನ್ನೂ. ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಸೆಪ್ಟೆಂಬರ್ 23ಕ್ಕೆ ಮುಂದೂಡಿದೆ. ಸರ್ಕಾರಿ ಅಭಿಯೋಜಕರಿಗೆ ಆಕ್ಷೇಪಣೆ ಸಲ್ಲಿಸುವಂತೆ ವಿಚಾರಣೆ ಮುಂದೂಡಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚನೆ ನೀಡಿತ್ತು.

ಪ್ರಕರಣ ಸಂಬಂಧ ಅತ್ಯಾಚಾರ ಸಂತ್ರಸ್ತೆಯನ್ನು ರಾಮನಗರದ ರೆಸಾರ್ಟ್ ಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಲಾಗಿದೆ. ಅತ್ಯಾಚಾರ ಆರೋಪ, ಬ್ಲ್ಯಾಕ್ ಮೇಲ್ ಆರೋಪಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗುಹಾಂತರ ರೆಸಾರ್ಟ್ ನಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಹನಿಟ್ರ್ಯಾಪ್ ನಡೆಸಿರುವುದಾಗಿ ಆರೋಪ ಮಾಡಿದ್ದಾರೆ.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...