ಬಳ್ಳಾರಿ : ಬಳ್ಳಾರಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.
6 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಂಜುನಾಥ್ ಕರೆದುಕೊಂಡು ಪೊಲೀಸರು ತೋರಣಗಲ್’ ನಲ್ಲಿ ಸ್ಥಳ ಮಹಜರು ನಡೆಸಲು ಹೋಗಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಮಂಜುನಾಥ್ ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೇ ಪೊಲೀಸ್ ಇನ್ಸ್ ಪೆಕ್ಟರ್ ರಾಕೇಶ್ ಮಂಜುನಾಥ ಕಾಲಿಗೆ ಗುಂಡು ಹಾರಿಸಿದ್ದಾರೆ.ಆರೋಪಿ ಮಂಜುನಾಥ್ ನನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮನೆ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಹೇಳಿ ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ ಘಟನೆ ಸಂಡೂರು ತಾಲೂಕಿನ ತೋರಣಗಲ್ಲು ರೈಲ್ವೆ ನಿಲ್ದಾಣದ ಸಮೀಪ ನಡೆದಿತ್ತು.
ಕಾರ್ಖಾನೆಯೊಂದರಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಜಾರ್ಖಂಡ್ ಮೂಲದ ದಂಪತಿ ಕೆಲಸಕ್ಕೆ ಹೋಗಿದ್ದ ವೇಳೆ ಅವರ ಐದು ವರ್ಷದ ಪುತ್ರಿ ಮನೆಯ ಮುಂದೆ ಆಟವಾಡುತ್ತಿದ್ದಳು. ಈ ವೇಳೆ ಸಿಸಿ ಕ್ಯಾಮೆರಾದಲ್ಲಿ ಬಾಲಕಿಯನ್ನು ಕರೆದೊಯ್ಯುತ್ತಿರುವ ದೃಶ್ಯ ಸೆರೆಯಾಗಿದ್ದು, ಆರೋಪಿಯ ಬಂಧನಕ್ಕೆ ಪೊಲೀಸರ 3 ವಿಶೇಷ ತಂಡಗಳನ್ನು ರಚಿಸಲಾಗಿತ್ತು,