alex Certify BREAKING : ಪೋಕ್ಸೋ ಕೇಸ್’ನಲ್ಲಿ ಮಾಜಿ ಸಿಎಂ ‘BSY’ ಗೆ ರಿಲೀಫ್ : ಖುದ್ದು ಹಾಜರಾತಿ ವಿನಾಯಿತಿ ಆದೇಶ ವಿಸ್ತರಿಸಿದ ಹೈಕೋರ್ಟ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪೋಕ್ಸೋ ಕೇಸ್’ನಲ್ಲಿ ಮಾಜಿ ಸಿಎಂ ‘BSY’ ಗೆ ರಿಲೀಫ್ : ಖುದ್ದು ಹಾಜರಾತಿ ವಿನಾಯಿತಿ ಆದೇಶ ವಿಸ್ತರಿಸಿದ ಹೈಕೋರ್ಟ್.!

ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ರಿಲೀಫ್ ಸಿಕ್ಕಿದ್ದು, ಯಡಿಯೂರಪ್ಪ ಅವರ ಖುದ್ದು ಹಾಜರಾತಿಗೆ ನೀಡಿದ್ದ ವಿನಾಯಿತಿಯನ್ನು ಕೋರ್ಟ್ ವಿಸ್ತರಿಸಿ ಆದೇಶ ಹೊರಡಿಸಿದೆ.. ಪ್ರಕರಣದ ತುರ್ತು ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ.

ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ್ದ ಹೈಕೋರ್ಟ್ ಯಡಿಯೂರಪ್ಪರನ್ನು ಬಂಧಿಸದಂತೆ ಸೂಚನೆ ನೀಡಿತ್ತು. ಬಳಿಕ ವಿಚಾರಣೆಯ ಖುದ್ದು ಹಾಜರಾತಿಗೆ  ವಿನಾಯಿತಿ ನೀಡಲಾಗಿತ್ತು.

ಮಾಜಿ ಸಿಎಂ ಯಡಿಯೂರಪ್ಪ ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...