ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಎ16 ಆರೋಪಿ ಕೇಶವಮೂರ್ತಿಗೆ ಜಾಮೀನು ಮಂಜೂರು ಮಾಡಲಾಗಿದೆ.
ತುಮಕೂರು ಜೈಲಿನಲ್ಲಿರುವ 16 ನೇ ಆರೋಪಿ ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಸಾಕ್ಷ್ಯನಾಶ ಆರೋಪ ಹೊತ್ತಿದ್ದಂಹ ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ನೀಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಅಂದರ್ ಆಗಿದ್ದರು. ಇದೀಗ ಪ್ರಕರಣದ 16 ನೇ ಆರೋಪಿಗೆ ಬೇಲ್ ಸಿಕ್ಕಿದ್ದು, ಹೈಕೋರ್ಟ್ ರಿಲೀಫ್ ನೀಡಿದೆ. ಈ ಮೂಲಕ ಉಳಿದ ಆರೋಪಿಗಳು ಕೂಡ ಬೇಲ್ ಸಿಗುವ ನಿರೀಕ್ಷೆಯಲ್ಲಿದ್ದಾರೆ.
ಇನ್ನೂ, ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-1 ಆರೋಪಿ ಪವಿತ್ರಾಗೌಡ, ಹಾಗೂ ಎ-2 ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆ.27 ಕ್ಕೆ ಮುಂದೂಡಿಕೆಯಾಗಿದ್ದು, ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಸೆ.25 ಕ್ಕೆ ನಿಗದಿಯಾಗಿದೆ.ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಈ ಆದೇಶ ಹೊರಡಿಸಿದೆ.