ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅಕ್ಟೋಬರ್ 22 ಕ್ಕೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಿಗದಿಯಾಗಿದೆ.
ನ್ಯಾಯಮೂರ್ತಿ ಎಸ್ .ವಿಶ್ವಜಿತ್ ಅವರನ್ನೊಳಗೊಂಡ ಹೈಕೋರ್ಟ್ ಏಕಸದಸ್ಯ ಪೀಠ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಲಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ನಟ ದರ್ಶನ್ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್ ಪರ ವಕೀಲರು ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ..ನಟ ದರ್ಶನ್ ಗೆ ಜಾಮೀನು ಕೋರಿ ಅವರ ಪರವಾಗಿ ಅರ್ಜಿ ಸಲ್ಲಿಸಿರುವುದಾಗಿ ವಕೀಲ ಸುನೀಲ್ ಕುಮಾರ್ ತಿಳಿಸಿದ್ದಾರೆ.
ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಕಾನೂನು ಹೋರಾಟದಲ್ಲಿ ಭಾರಿ ಹಿನ್ನಡೆಯಾಗಿದ್ದು, ಜಾಮೀನು ಅರ್ಜಿ ವಜಾಗೊಂಡಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್, ಬಳ್ಳಾರಿ ಜೈಲು ಸೇರಿದ್ದು, ಜಾಮೀನಿನ ನಿರೀಕ್ಷೆಯಲ್ಲಿದ್ದರು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿ ಹೆಚ್ ಕೋರ್ಟ್ ನಟ ದರ್ಶನ್ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆ ನಟ ದರ್ಶನ್ ಹೈಕೋರ್ಟ್ ಮೊರೆ ಹೋಗಿದ್ದಾರೆ.