ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ನಟ ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಮನೆಯಿಂದ ಊಟ, ಹಾಸಿಗೆ. ಪುಸ್ತಕ ತರಿಸಿಕೊಳ್ಳಲು ಅನುಮತಿ ನೀಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ನಟ ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಸದ್ಯಕ್ಕೆ ಬಿಡುಗಡೆ ಭಾಗ್ಯ ಇಲ್ಲ. ಜುಲೈ 18 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.