alex Certify BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ಜಾಮೀನು ಕೋರಿ ಇಂದು ನಟ ದರ್ಶನ್ ಹೈಕೋರ್ಟ್’ ಗೆ ಅರ್ಜಿ ಸಲ್ಲಿಕೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ಜಾಮೀನು ಕೋರಿ ಇಂದು ನಟ ದರ್ಶನ್ ಹೈಕೋರ್ಟ್’ ಗೆ ಅರ್ಜಿ ಸಲ್ಲಿಕೆ.!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ನಟ ದರ್ಶನ್ ಇಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ. ಇಂದು ಸಂಜೆ 4 ಗಂಟೆ ಒಳಗೆ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಲಿದ್ದಾರೆ.

ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲ್ ನಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಬಳ್ಳಾರಿ ಕಾರಾಗೃಹ ಸೇರಿದ್ದರು. ಜೂನ್ 11ರಂದು ಮೈಸೂರಿನಲ್ಲಿ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದರು. ಕೊಲೆ ಪ್ರಕರಣದ ವಿಚಾರಣೆಯ ನಂತರ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು. ವಿಚರಣಾಧೀನ ಕೈದಿಯಾಗಿದ್ದ ದರ್ಶನ್ ಜೈಲಿನಲ್ಲಿ ರಾಜಾತಿಥ್ಯ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು.

ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಕಾನೂನು ಹೋರಾಟದಲ್ಲಿ ಭಾರಿ ಹಿನ್ನಡೆಯಾಗಿದ್ದು, ಜಾಮೀನು ಅರ್ಜಿ ವಜಾಗೊಂಡಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್, ಬಳ್ಳಾರಿ ಜೈಲು ಸೇರಿದ್ದು, ಜಾಮೀನಿನ ನಿರೀಕ್ಷೆಯಲ್ಲಿದ್ದರು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿ ಹೆಚ್ ಕೋರ್ಟ್ ನಟ ದರ್ಶನ್ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಹೈಕೋರ್ಟ್ ಗೆ ಇಂದು ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...